ತಿಹಾರ್ ಜೈಲಿಗೆ ಹೊರಟ ಚಿದಂಬರಂ: ವಿಶೇಷ ಸೆಲ್’ನಲ್ಲಿ 14 ದಿನ!

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಪಿ ಚಿದಂಬರಂ| ತಿಹಾರ್ ಜೈಲಿಗೆ ಪಿ. ಚಿದಂಬರಂ| ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನಲೆ| ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿನಲ್ಲಿರಲಿದ್ದಾರೆ ಚಿದಂಬರಂ| 

P Chidambaram Sent To Tihar Jail As Court Orders Judicial Custody

ನವದೆಹಲಿ(ಸೆ.05): ಮಹತ್ವದ ಬೆಳವಣಿಗೆಯೊಂದರಲ್ಲಿ ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ದೆಹಲಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ದೆಹಲಿಯ ವಿಶೇಷ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹಾರ್ ಅವರು ಚಿದಂಬರಂ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

ಪ್ರಕರಣ ಸಂಬಂಧ ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ,  ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅಲ್ಲದೇ ಚಿದಂಬರಂ ಅವರನ್ನು ತಿಹಾರ್ ಜೈಲಿನ ವಿಶೇಷ ಕೊಠಡಿಯಲ್ಲಿಡಲು ಸೂಚಿಸಿದೆ.

ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ, ಪುತ್ರನಿಗೆ ಜಾಮೀನು:

ಇನ್ನು ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿಗೆ ದೆಹಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪಿ.ಚಿದಂಬರಂ ಮತ್ತು ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಪ್ರಕರಣ ದಾಖಲಿಸಿತ್ತು. ವಿಶೇಷ ಜಡ್ಜ್ ಒಪಿ ಸೈನಿ ಚಿದಂಬರಂ ಮತ್ತು ಅವರ ಪುತ್ರನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ತಲಾ ಒಂದು ಲಕ್ಷ ರೂ. ವೈಯಕ್ತಿಕ ಬಾಂಡ್ ನೀಡುವುದರ ಜೊತೆಗೆ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ.

Latest Videos
Follow Us:
Download App:
  • android
  • ios