ಸಿಬಿಐನಿಂದ ಜೂನ್ 6ಕ್ಕೆ ಚಿದಂಬರಂ ವಿಚಾರಣೆ

news | Friday, June 1st, 2018
Suvarna Web Desk
Highlights

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಸಿಬಿಐ ವಿಚಾರಣೆ ನಡೆಸಲಿದೆ. ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಜುಲೈ 3ರವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು.

ನವದೆಹಲಿ(ಜೂ.1): ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಸಿಬಿಐ ವಿಚಾರಣೆ ನಡೆಸಲಿದೆ. ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಜುಲೈ 3ರವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು.

ಏರ್ ಸೆಲ್-ಮ್ಯಾಕ್ಸಿಸ್ 3,500 ಕೋಟಿ ರೂ. ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ.ಗಳ ಅಕ್ರಮ ವ್ಯವಹಾರದಲ್ಲಿ ಚಿದಂಬರಂ ಕೈವಾಡವಿರುವ ಶಂಕೆಯನ್ನು ಸಿಬಿಐ ವ್ಯಕ್ತಪಡಿಸಿತ್ತು.

ಯುಪಿಎ-1 ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಈ ಎರಡೂ ಸಂಸ್ಥೆಗಳಿಗೆ  ಅನುಕೂಲವಾಗುವಂತೆ  ವಿದೇಶೀ ಹೂಡಿಕೆ ಪ್ರಚಾರ ಮಂಡಳಿಗೆ ಅನುಮತಿ ನೀಡಿದ್ದರು ಎಂಬ ಆರೋಪವಿದೆ.  ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಳೆದ ವರ್ಷ ಮೇ 15ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.

Comments 0
Add Comment

  Related Posts

  DK Shivakumar Appears Court In IT Raid Case

  video | Thursday, March 22nd, 2018

  Actress Meghana Gaonkar Harassed

  video | Wednesday, March 21st, 2018

  The Reason Behind Veerappa Moily Tweet

  video | Friday, March 16th, 2018

  DK Shivakumar Appears Court In IT Raid Case

  video | Thursday, March 22nd, 2018
  nikhil vk