ಶ್ರೀನಗರ(ಸೆ.27): ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಉಗ್ರರ ಮೇಲೆ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದು, ಪ್ರಾಣ ಉಳಿಸಿಕೊಳ್ಳಲು ಉಗ್ರರು ಓಡಿ ಹೋಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಕುರಿತು ಭಾರತೀಯ ಸೇನೆ ವಿಡಿಯೋ ಬಿಡುಗಡೆ ಮಾಡಿದ್ದು, ಸುಮಾರು 5 ರಿಂದ 6 ಉಗ್ರರು ಏಕಕಾಲದಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ್ದುನ್ನು ಕಾಣಬಹುದಾಗಿದೆ. ಈ ವೇಳೆ ಉಗ್ರರತ್ತ ಯೋಧರು ಗುಂಡು ಹಾರಿಸಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೇ ಉಗ್ರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಕಳೆದ ಜುಲೈ 30ರಂದು ಈ ಘಟನೆ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ರೇಖೆ LoC ಬಳಿಯ ಕುಪ್ವಾರಾ ವಲಯದಲ್ಲಿ ಉಗ್ರರು ನುಸುಳಲು ಮಾಡುತ್ತಿರುವ ವಿಫಲ ಪ್ರಯತ್ನ ಬೆಳಕಿಗೆ ಬಂದಿದೆ.

ಬಾಲಾಕೋಟ್ ಉಗ್ರರ ಕ್ಯಾಂಪ್ ಮತ್ತೆ ಚಟುವಟಿಕೆ ಆರಂಭಿಸಿದ್ದು, ಸುಮಾರು 400ರಿಂದ 500 ಉಗ್ರರು ತರಬೇತಿ ಪಡೆಯುತ್ತಿದ್ದಾರೆ ಎಂದು ಭಾರತೀಯ ಭೂಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದರು. ಆದರೆ ಪಾಕಿಸ್ತಾನ ರಾವತ್ ಹೇಳಿಕೆಯನ್ನು ತಿರಸ್ಕರಿಸಿತ್ತು. ಇದೀಗ ಗಡಿಯಲ್ಲಿ ಉಗ್ರರ ಒಳನುಸುಳಿವಿಕೆ ಯತ್ನ ಬಿಪಿನ್ ರಾವತ್ ಅವರ ಹೇಳಿಕೆಯನ್ನು ಸ್ಪಷ್ಟೀಕರಿಸಿದೆ.

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: