ಇಸ್ಲಮಾಬಾದ್ (ಮೇ.23): ಭಾರತೀಯ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆಯನ್ನು ಆದಷ್ಟು ಬೇಗ ನಡೆಸಬೇಕೆಂದು ಪಾಕಿಸ್ತಾನ ಅಂತರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಯನ್ನು ಕೇಳಿಕೊಂಡಿದೆ.

ಪಾಕಿಸ್ತಾನ ವಿದೇಶಾಂಗ ಇಲಾಖೆಯು ಸಿಐಜೆಗೆ ಪತ್ರ ಬರೆದಿದ್ದು ಆದಷ್ಟು ಶೀಘ್ರದಲ್ಲಿ ಇನ್ನು ಕೆಲವೇ ವಾರಗಳಲ್ಲಿ ವಿಚಾರಣೆ ನಡೆಸಿ ಎಂದು ಕೇಳಿಕೊಂಡಿದೆ. ಐಸಿಜೆ ನ್ಯಾಯಾಧೀಶರ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ  ಬೇಗ ವಿಚಾರಣೆ ನಡೆಸುವಂತೆ ಕೇಳಿಕೊಂಡಿದೆ.

ಅಕ್ಟೋಬರ್ ನಲ್ಲಿ ಐಸಿಜೆ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ ಮಿಲಿಟರಿ ಕೋರ್ಟ್ ಕುಲಭೂಷಣ್ ಜಾಧವ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಗೆ ಐಸಿಜೆ ತಡೆ ನೀಡಿದೆ. ಮುಂದಿನ ಆದೇಶ ಬರುವವರೆಗೆ ಗಲ್ಲುಶಿಕ್ಷೆ ನೀಡುವಂತಿಲ್ಲವೆಂದು ಮಹತ್ತರ ತೀರ್ಪು ನೀಡಿತ್ತು. ಇದರಿಂದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.