ಇಸ್ಲಾಮಾಬಾದ್‌(ಫೆ.17): ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದೆ ತನ್ನ ಕೈವಾಡ ಇರುವುದನ್ನು ಪಾಕಿಸ್ತಾನ ಸಂಪೂರ್ಣವಾಗಿ ಅಲ್ಲಗಳೆದಿದೆ. ಪುಲ್ವಾಮಾ ಉಗ್ರರ ದಾಳಿಯ ಕುರಿತು ಭಾರತ ಸಾಕ್ಷ್ಯ ನೀಡಿದರೆ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಪಾಕ್ ಭರವಸೆ ನೀಡಿದೆ.

ಈ ಕುರಿತು ಮಾತನಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಶಿ, ಪುಲ್ವಾಮಾ ಉಗ್ರರ ದಾಳಿಯಿಂದ ಆಕ್ರೋಶಗೊಂಡಿರುವ ಭಾರತ ಪಾಕಿಸ್ತಾನದ ವಿರುದ್ಧ ಸೇನಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಆತಂಕವನ್ನು ತೋಡಿಕೊಂಡಿದ್ದಾರೆ. 

ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಪಾತ್ರವಿರುವ ಬಗ್ಗೆ ಸಾಕ್ಷಿಗಳನ್ನು ನೀಡಲಿ. ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಖುರೇಶಿ ಈ ವೇಳೆ ಹೇಳಿದ್ದಾರೆ. ಇನ್ನು ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ತೆಹ್ಮೀನಾ ಜನ್‌ಜುವಾ ಪುಲ್ವಾಮಾ ಕೂಡ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿಲ್ಲ ಎಂದಿದ್ದಾರೆ.