ಮಾಜಿ ಯೋಧ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ಗಲ್ಲುಶಿಕ್ಷೆ ವಿಧಿಸಿರುವುದನ್ನು ಸಾಕಷ್ಟು ದೇಶಗಳು ಖಂಡಿಸಿದ್ದು, ಪಾಕ್ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿವೆ.
ನವದೆಹಲಿ (ಏ.11): ಮಾಜಿ ಯೋಧ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ಗಲ್ಲುಶಿಕ್ಷೆ ವಿಧಿಸಿರುವುದನ್ನು ಸಾಕಷ್ಟು ದೇಶಗಳು ಖಂಡಿಸಿದ್ದು, ಪಾಕ್ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿವೆ. ಆದರೆ ಪಾಕಿಸ್ತಾನ ರಕ್ಷಣಾ ಸಚಿವ ಕವಾಜ ಆಸಿಫ್, ಜಾಧವ್ ಗೆ ಗಲ್ಲುಶಿಕ್ಷೆ ವಿಧಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲಿನ ಕಾನೂನು ನಿಯಮಗಳನ್ನು ಪಾಲಿಸಲಾಗಿದೆ ಎಂದಿದ್ದಾರೆ. ತೀರ್ಪಿನ ವಿರುದ್ಧ ಜಾಧವ್ 60 ದಿನಗಳೊಳಗೆ ಮೇಲ್ಮನವಿ ಸಲ್ಲಿಸಬಹುದು ಎಂದಿದ್ದಾರೆ.
ಇದಕ್ಕೆ ಈಗಾಗಲೇ ಪ್ರತಿಕ್ರಿಯಿಸಿರುವ ಸುಷ್ಮಾ ಸ್ವರಾಜ್ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಎದುರಿಸಬೇಕಾಗುವುದು ಎಂದು ಹೇಳಿದ್ದಾರೆ.
