ಭಾರತ ನಮ್ಮ ನೆಲದ ಮೇಲೆ ಸರ್ಜಿಕಲ್ ದಾಳಿ ನಡೆಸಿದರೆ ಅಥವಾ ನಮ್ಮ ಅಣುಸ್ಥಾವರದ ಮೇಲೆ ದಾಳಿ ಮಾಡಿದರೆ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ನಾವು ಉತ್ತರ ನೀಡುತ್ತೇವೆ. ಯಾರೂ ನಿರೀಕ್ಷೆ ಮಾಡದ ಘಟನೆ ನಡೆಯುತ್ತದೆ ಎಂದು ಪಾಕ್ ವಿದೇಶಾಂಗ ಸಚಿವ ಖವಾಜ ಆಸೀಫ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ (ಅ.06): ಭಾರತ ನಮ್ಮ ನೆಲದ ಮೇಲೆ ಸರ್ಜಿಕಲ್ ದಾಳಿ ನಡೆಸಿದರೆ ಅಥವಾ ನಮ್ಮ ಅಣುಸ್ಥಾವರದ ಮೇಲೆ ದಾಳಿ ಮಾಡಿದರೆ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ನಾವು ಉತ್ತರ ನೀಡುತ್ತೇವೆ. ಯಾರೂ ನಿರೀಕ್ಷೆ ಮಾಡದ ಘಟನೆ ನಡೆಯುತ್ತದೆ ಎಂದು ಪಾಕ್ ವಿದೇಶಾಂಗ ಸಚಿವ ಖವಾಜ ಆಸೀಫ್ ಎಚ್ಚರಿಕೆ ನೀಡಿದ್ದಾರೆ.
ನಾವು ಸಂಪೂರ್ಣ ಕಾರ್ಯಾಚರಣೆ ನಡೆಸಲು ಸನ್ನದ್ಧವಾಗಿದ್ದೇವೆ ಎಂದು ವಾಯುಸೇನೆ ಸೇನಾ ಮುಖಸ್ಥ ಬಿ ಎಸ್ ಧೊವಲ್ ಹೇಳಿದ್ದರು. ಅವರ ಹೇಳಿಕೆಗೆ ಪಾಕಿಸ್ತಾನ ಮರು ಹೇಳಿಕೆ ನೀಡಿದೆ. ಪಾಕಿಸ್ತಾನ ನೆರೆಹೊರೆಯ ದೇಶಗಳೊಂದಿಗೆ ಶಾಂತಿ ಮತ್ತು ಸೌಹಾರ್ದಯುತವಾಗಿ ಇರಲು ಬಯಸುತ್ತದೆ ಎಂದು ಪಾಕಿಸ್ತಾನ ಹೇಳಿದೆ.
ಭಾರತ-ಪಾಕಿಸ್ತಾನ ಸಂಬಂಧ ಹದಗೆಟ್ಟಿದೆ. ಉಭಯ ದೇಶಗಳ ಸಂಬಂಧವನ್ನು ವೃದ್ಧಿಪಡಿಸಲು ನಾವು ಪ್ರಯತ್ನಿಸಿದರೆ ಭಾರತ ಇದಕ್ಕೆ ಪ್ರತಿಕ್ರಿಯಿಸುತ್ತಿಲ್ಲ. ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಇದಕ್ಕೆ ದೊಡ್ಡ ಅಡ್ಡಿಯಾಗಿದೆ ಎಂದು ಖವಾಜ ಆಸೀಫ್ ಹೇಳಿದ್ದಾರೆ. ಪಾಕಿಸ್ತಾನವನ್ನು ಭಯೋತ್ಪಾದಕ ದೇಶವಾಗಿ ನೋಡಬೇಡಿ. ಇದನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.
