ಲಾಹೋರ್‌ [ಜು.18]: ಕರ್ತಾರ್‌ಪುರ ಗುರುದ್ವಾರಕ್ಕೆ ಪಾಕಿಸ್ತಾನ 42 ಎಕರೆ ಭೂಮಿಯನ್ನು ನೀಡುವುದಾಗಿ ಪಾಕಿಸ್ತಾನ ಹೇಳಿದೆ. 

ಈ ಕುರಿತು ಹೇಳಿಕೆ ನೀಡಿರುವ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಗವರ್ನರ್‌ ಚೌಧರಿ ಮುಹಮ್ಮದ್‌ ಸರ್ವಾರ್‌, ಗುರುದ್ವಾರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಈ ಹಿಂದೆ ಘೋಷಿಸಿದ್ದ 3 ಎಕರೆ ಭೂಮಿಯ ಬದಲಾಗಿ 42 ಎಕರೆ ಭೂಮಿಯನ್ನು ನೀಡಲು ನಿರ್ಧರಿಸಲಾಗಿದೆ. ಆದರೆ ಈ ಜಾಗದಲ್ಲಿ ಯಾವುದೇ ನಿರ್ಮಾಣ ಕಾರ್ಯ ಕೈಗೊಳ್ಳುವಂತಿಲ್ಲ. 

ಈ ಜಾಗದಲ್ಲಿ ಕೃಷಿ ಚಟುವಟಿಕೆಗಳನ್ನು ಮಾತ್ರ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ. ಇದರೊಂದಿಗೆ ಕರ್ತಾರ್‌ಪುರದಲ್ಲಿ ಗುರುದ್ವಾರಕ್ಕೆ ಒಟ್ಟಾರೆ 104 ಎಕರೆ ಜಾಗ ನೀಡಿದಂತಾಗಿದೆ ಎಂದು ಹೇಳಿದ್ದಾರೆ.