ಇಸ್ಲಾಮಾಬಾದ್‌[ಮಾ.06]: ಪಾಕಿಸ್ತಾನದ ಖಾಸಗಿ ಚಾನೆಲ್‌ಗಳಲ್ಲಿ ಭಾರತದ ಚಲನಚಿತ್ರಗಳು ಮತ್ತು ಟೀವಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವುದಕ್ಕೆ ಪಾಕಿಸ್ತಾನದ ಸುಪ್ರೀಂಕೋರ್ಟ್‌ ನಿಷೇಧ ಹೇರಿದೆ.

ಪುಲ್ವಾಮಾ ದಾಳಿಯ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪಾಕ್‌ನ ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಚೌಧರಿ ಫವಾದ್‌ ಹುಸೇನ್‌ ಭಾರತೀಯ ಚಲನಚಿತ್ರ ಹಾಗೂ ಟಿವಿ ಕಾರ್ಯಕ್ರಮಗಳ ಮೇಲೆ ನಿಷೇಧ ಹೇರಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.

ಇನ್ನು ಪುಲ್ವಾಮಾ ದಾಳಿ ನಡೆದ ಬೆನ್ನಲ್ಲೇ ಭಾರತ ಕೂಡಾ ಪಾಕಿಸ್ತಾನದ ಕಲಾವಿದರಿಗೆ ನಿಷೇಧ ಹೇರಿತ್ತು ಎಂಬುವುದು ಉಲ್ಲೇಖನೀಯ.