ನವದೆಹಲಿ(ಫೆ.28): ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಸೇನಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಘೋಷಿಸಿದೆ.

ಈ ಕುರಿತು ಪಾಕ್ ಸಂಸತ್ತಿನಲ್ಲಿ ಮಾತನಾಡಿದ ಇಮ್ರಾನ್ ಖಾನ್, ನಮ್ಮ ವಶದಲ್ಲಿರುವ ಭಾರತೀಯ ಪೈಲೆಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಭಾರತೀಯ ಪೈಲೆಟ್ ಅಭಿನಂದನ್ ಅವರನ್ನು ಬಿಡುಗಡೆಗೊಳಿಸುವಂತೆ ಭಾರತ ಒತ್ತಾಯ ಮಾಡುತ್ತಲೇ ಇತ್ತು. ಸದ್ಯ ಭಾರತದ ಒತ್ತಾಯಕ್ಕೆ ಮಣಿದಿರುವ ಪಾಕ್, ಪೈಲೆಟ್ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಈ ಕುರಿತು ಪಾಕ್ ಸಂಸತ್ತಿನಲ್ಲಿ ಮಾತನಾಡಿದ ಇಮ್ರಾನ್ ಖಾನ್, ನಿನ್ನೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ.

ಪಾಕಿಸ್ತಾನ ಶಾಂತಿ ಬಯಸುತ್ತಿದ್ದು, ಭಾರತ ಎಲ್ಲಾ ವೈಮನಸ್ಸನ್ನು ಬದಿಗಿರಿಸಿ ಶಾಂತಿ ಮಾತುಕತೆಗೆ ಮುಂದಾಗಬೇಕೆಂದು ಇಮ್ರಾನ್ ಖಾನ್ ಮತ್ತೊಮ್ಮೆ ಭಾರತಕ್ಕೆ ಮನವಿ ಮಾಡಿದ್ದಾರೆ.