ನವದೆಹಲಿ(ಸೆ.27): ಭಾರತ ಪ್ರಧಾನಿ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದು, ಇದಕ್ಕೂ ಮುಂಚೆಯೇ ಪಾಕ್ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ. 

ಇಂದು ಬೆಳಗ್ಗೆ ರಾಜೋರಿ ಜಿಲ್ಲೆಯ ನೌಶೆರಾ ಸೆಕ್ಟರ್‌ನಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಚೆಕ್‌ಪೋಸ್ಟ್‌ಗಳತ್ತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದಿರುವ ಸೇನೆ, ಪಾಕ್‌ಗೆ ತಕ್ಕ ಉತ್ತರ ನೀಡಲು ಸಿದ್ಧವಿರುದಾಗಿ ತಿಳಿಸಿದೆ. ಉಗ್ರರನ್ನು ಭಾರತದೊಳಗೆ ನುಗ್ಗಿಸುವ ಉದ್ದೇಶದಿಂದ ಪಾಕ್  ಕದನ ವಿರಾಮ ಉಲ್ಲಂಘಿಸುವ ನಾಟಕವಾಡುತ್ತಿದೆ ಎನ್ನಲಾಗಿದೆ.