ಹಿಂದೂ ದೇವಸ್ಥಾನ, ಸಮುದಾಯ ಕೇಂದ್ರ ಮತ್ತು ಸ್ಮಶಾನಕ್ಕಾಗಿ ಅರ್ಧ ಎಕರೆ ಜಾಗ ನೀಡಲು ಕ್ಯಾಪಿಟಲ್ ಅಭಿವೃದ್ಧಿ ಇಲಾಖೆ ಸಮ್ಮತಿಸಿದೆ ಎಂದು ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ಪತ್ರಿಕೆ ವರದಿ ಮಾಡಿದೆ.
ಇಸ್ಲಾಮಾಬಾದ್(ಡಿ.10): ಪಾಕಿಸ್ತಾನ ರಾಜಧಾನಿಯಲ್ಲಿ ವಾಸಿಸುತ್ತಿರುವ ಹಿಂದೂಗಳ ಬಹುದಿನಗಳ ಬೇಡಿಕೆಯಾಗಿರುವ ದೇವಾಲಯ ನಿರ್ಮಾಣ, ಸಮುದಾಯ ಭವನ ಮತ್ತು ಸ್ಮಶಾನಕ್ಕಾಗಿ ಜಾಗ ನೀಡಲು ಅಧಿಕಾರಿಗಳು ಒಪ್ಪಿಗೆ ನೀಡಿದ್ದಾರೆ.
ನಾಗರಿಕರ ಸೌಲಭ್ಯಗಳು ಮತ್ತು ಕ್ಯಾಪಿಟಲ್ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿಂದೂ ದೇವಸ್ಥಾನ, ಸಮುದಾಯ ಕೇಂದ್ರ ಮತ್ತು ಸ್ಮಶಾನಕ್ಕಾಗಿ ಅರ್ಧ ಎಕರೆ ಜಾಗ ನೀಡಲು ಕ್ಯಾಪಿಟಲ್ ಅಭಿವೃದ್ಧಿ ಇಲಾಖೆ ಸಮ್ಮತಿಸಿದೆ ಎಂದು ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ಪತ್ರಿಕೆ ವರದಿ ಮಾಡಿದೆ.
ಸಂಸತ್ತಿಗೆ ತೃತೀಯ ಲಿಂಗಿಗಳ ಆಹ್ವಾನ:
ಪಾಕಿಸ್ತಾನದಲ್ಲಿ ತೃತೀಯ ಲಿಂಗಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವರ ಹಕ್ಕುಗಳ ಉಲ್ಲಂಘನೆ ತಡೆಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ಚರ್ಚೆ ಮಾಡಲು ಅವರನ್ನು ಸಂಸತ್ತಿಗೆ ಆಹ್ವಾನಿಸಲು ಪಾಕಿಸ್ತಾನದ ಸೆನೆಟ್ ನಿರ್ಧರಿಸಿದೆ.
ಶುಕ್ರವಾರ ನಡೆದ ಪಾಕಿಸ್ತಾನ ಸಂಸತ್ತಿನ ಕಲಾಪದಲ್ಲಿ ತೃತೀಯ ಲಿಂಗಿಗಳ ಸಮಸ್ಯೆಗಳ ಬಗ್ಗೆ ಸಂಸದ ಮೌಲಾನಾ ಹಫೀಜ್ ಹಮ್ದುಲ್ಲಾಹ್ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚೆ ನಡೆಸುವ ವಿಚಾರವನ್ನು ಸಂಸತ್ತಿನ ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ.
