ಭಾರತದ ರಹಸ್ಯ ಮಾಹಿತಿಗಳನ್ನು ಪಡೆಯುವ ಸಲುವಾಗಿ, ಇಸ್ಲಾಮಾಬಾದ್’ನಲ್ಲಿ  ಕಾರ್ಯನಿರ್ವಹಿಸುತ್ತಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಕೆಡವಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಸಂಚು ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

ನವದೆಹಲಿ (ಡಿ.18): ಭಾರತದ ರಹಸ್ಯ ಮಾಹಿತಿಗಳನ್ನು ಪಡೆಯುವ ಸಲುವಾಗಿ, ಇಸ್ಲಾಮಾಬಾದ್’ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಯಭಾರ ಕಚೇರಿ ಸಿಬ್ಬಂದಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಕೆಡವಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಸಂಚು ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

ಆದರೆ ಮಾಹಿತಿ ತಿಳಿಯುತ್ತಲೇ ಭಾರತೀಯ ಗುಪ್ತಚರ ಇಲಾಖೆ, ಈ ಮಾಹಿತಿಯನ್ನು ಪಾಕ್’ನಲ್ಲಿನ ಭಾರತೀಯ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳಿಗೆ ರವಾನಿಸುವ ಮೂಲಕ ಐಎಸ್ಐ ಸಂಚನ್ನು ವಿಫಲಗೊಳಿಸಿದ್ದಾರೆ.

ಈ ನಡುವೆ ಹನಿಟ್ರ್ಯಾಪ್ ಜಾಲದ ಸುಳಿಯಲ್ಲಿ ಸಿಕ್ಕಿದ್ದರು ಎನ್ನಲಾದ ಮೂವರು ಕಿರಿಯ ಅಧಿಕಾರಿಗಳು, ಭಾರತಕ್ಕೆ ಮರಳಿದ್ದು, ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಪ್ರಾಥಮಿಕ ವಿಚಾರಣೆ ವೇಳೆ ಈ ಅಧಿಕಾರಿಗಳು ಯಾವುದೇ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿಲ್ಲ ಎನ್ನಲಾಗಿದೆ.