ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮುಂಜಾನೆ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಲಿಮಾರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಉಡುಪಿ (ಮಾ. 26): ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶೋಭಾ ಕರಂದ್ಲಾಜೆ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಮುಂಜಾನೆ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಲಿಮಾರು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಧ್ಯಾತ್ಮಿಕ ಶ್ರೀಗಳಲ್ಲಿ ನನ್ನ ಲೌಕಿಕ ವಿನಂತಿಯಿದೆ. ಈ ಬಾರಿ ಕೃಷ್ಣನಲ್ಲಿ ದೇಶಕ್ಕಾಗಿ ಪ್ರಾರ್ಥಿಸಬೇಕು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು ದೇಶ ಸುರಕ್ಷಿತರ ಕೈಯ್ಯಲ್ಲಿರುವಂತೆ ದೇವರಲ್ಲಿ ಪ್ರಾರ್ಥಿಸಿ. ಮತ್ತೆ ಬಿಜೆಪಿ ಸರಕಾರ ರಚನೆಯಾಗುವಂತೆ ಆಶೀರ್ವದಿಸಿ ಎಂದು ನಿರ್ಮಲಾ ಸೀತಾರಾಮನ್ ವಿನಂತಿ ಮಾಡಿದ್ದಾರೆ. 

ಉಡುಪಿ ಜೊತೆ ನನಗೆ ಒಂದನೇ ವರ್ಷದಿಂದ ನಂಟು ಇದೆ. ಕೊಲ್ಲೂರು, ಕೃಷ್ಣಮಠದ ಜೊತೆ ನಿರಂತರ ಸಂಪರ್ಕವಿದೆ. ಮಠದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು. 

ಪಾಕಿಸ್ತಾನ ವಿಮಾನವನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ನನ್ನು ಉಡುಪಿಗೆ ಕಳುಹಿಸಿಕೊಡಿ. ಅವರ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಕೃಷ್ಣಮಠದಲ್ಲಿ ಅಭಿನಂದನ್ ಗೆ ಗೌರವಾರ್ಪಣೆ ಮಾಡಬೇಕು ಎಂದು ಉಡುಪಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿ ಅವರು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮ್ ಅವರಲ್ಲಿ ಮನವಿ ಮಾಡಿದ್ದಾರೆ.

"<br/> <br/>ಇದಕ್ಕೆ ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಖಂಡಿತಾ ಕಳುಹಿಸಿಕೊಡುತ್ತೇವೆ. ಮಠದ ವತಿಯಿಂದ ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದವರು ಭರವಸೆ ನೀಡಿದರು.

ಈ ಸಂದರ್ಭ ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ಭಾರತೀ ಶೆಟ್ಟಿ, ಉಡುಪಿ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.