ಉಪ ಮುಖ್ಯಮಂತ್ರಿ ಪರಮೇಶ್ವರ್ ನೀಡಿದ ಸುಳಿವೇನು..?

Parameshwar Reaction About Farm Loan Waiving
Highlights

ಜೆಡಿಎಸ್‌ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವ ಸಾಲ ಮನ್ನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಸಹಕಾರ ಕೊಡುತ್ತದೆ. ಆದರೆ, ಸಾಲ ಮನ್ನಾ ಮಾಡಲು ಗಡುವು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ .ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರು :  ಜೆಡಿಎಸ್‌ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವ ಸಾಲ ಮನ್ನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಸಹಕಾರ ಕೊಡುತ್ತದೆ. ಆದರೆ, ಸಾಲ ಮನ್ನಾ ಮಾಡಲು ಗಡುವು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ .ಪರಮೇಶ್ವರ್‌ ಹೇಳಿದ್ದಾರೆ.

ಗುರುವಾರ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಲ ಮನ್ನಾ ಸೇರಿದಂತೆ ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿನ ಸಾಮಾನ್ಯ ಕಾರ್ಯಕ್ರಮಗಳ ಜಾರಿ ಕುರಿತು ಕಾರ್ಯಸೂಚಿ ರಚಿಸಲಾಗುವುದು. ಬಳಿಕ ಕಾರ್ಯಕ್ರಮಗಳನ್ನು ಮೈತ್ರಿ ಸರ್ಕಾರದ ವತಿಯಿಂದ ಅನುಷ್ಠಾನಗೊಳಿಸಲಾಗುವುದು ಎಂದರು.

ಈ ವೇಳೆ ಸಾಲ ಮನ್ನಾಗೆ ವಿರೋಧ ಪಕ್ಷಗಳು ಗಡುವ ವಿಧಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲಮನ್ನಾ ವಿಚಾರವಾಗಿ ಗಡುವು ವಿಧಿಸಲು ಸಾಧ್ಯವಿಲ್ಲ . ಸಾವಿರಾರು ಕೋಟಿ ರು. ವ್ಯವಹಾರ ವಾಗಿರುವುದರಿಂದ ಅದರ ಪ್ರಕ್ರಿಯೆಗೆ ಕಾಲಾವಕಾಶ ಬೇಕಾಗುತ್ತದೆ. ಪ್ರಸ್ತುತ ಯಾವ ರೀತಿಯಲ್ಲಿ ಸಾಲ ಮನ್ನಾ ಮಾಡಬಹುದು ಎಂಬುದನ್ನು ಪರಿಶೀಲಿಸಲು ಹಣಕಾಸು ಇಲಾಖೆಗೆ ವಹಿಸಿದ್ದು, ಅವರು ಈ ಬಗ್ಗೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಗಡುವು ವಿಧಿಸುವುದು ಸರಿಯಲ್ಲ ಎಂದು ಹೇಳಿದರು.

ಅಲ್ಲದೆ, ಸಮನ್ವಯ ಸಮಿತಿಯಲ್ಲಿ ಹಿಂದಿನ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಿಗೆ ಸಮಸ್ಯೆ ಇಲ್ಲ ಎಂದರು.

loader