ಚರ್ಚ್ ಸ್ಟ್ರೀಟ್’ನಲ್ಲಿ ವಾಹನ ನಿಲುಗಡೆ ನಿಷೇಧ

First Published 17, Mar 2018, 10:20 AM IST
Parking banned on Church Street
Highlights

ಟೆಂಡರ್‌ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವುಮಾಡಿಕೊಡಲಾಗಿರುವ ಚರ್ಚ್‌ಸ್ಟ್ರೀಟ್ ರಸ್ತೆಯಲ್ಲಿನ ಎರಡು ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಟೆಂಡರ್‌ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವುಮಾಡಿಕೊಡಲಾಗಿರುವ ಚರ್ಚ್‌ಸ್ಟ್ರೀಟ್ ರಸ್ತೆಯಲ್ಲಿನ ಎರಡು ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಚರ್ಚ್ ಸ್ಟ್ರೀಟ್‌ನಲ್ಲಿ ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ-ಸೇಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

loader