Asianet Suvarna News Asianet Suvarna News

ಡಿ.15ರಿಂದ ಸಂಸತ್ ಅಧಿವೇಶನ ಶುರು: ಬಿಸಿಬಿಸಿ ಚರ್ಚೆ

ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಡೆಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪ ಬೆನ್ನಲ್ಲೇ, ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ಮರುದಿನದಿಂದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

Parliament Winter Session To Begin From Dec 15

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ನಡೆಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪ ಬೆನ್ನಲ್ಲೇ, ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ಮರುದಿನದಿಂದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಡಿ.15ರಿಂದ ಜ.೫ರವರೆಗೆ ಒಟ್ಟು 14 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಗೃಹ ಸಚಿವ ರಾಜನಾಥ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ ಶುಕ್ರವಾರ ತೀರ್ಮಾನ ಕೈಗೊಂಡಿದೆ.

ಈ ಸಂಬಂಧ ರಾಷ್ಟ್ರಪತಿ ಕೋವಿಂದ್ ಅವರಿಗೆ ಶಿಫಾರಸು ಮಾಡಿದೆ.ಈ ಅಧಿವೇಶನದಲ್ಲಿ ತ್ರಿವಳಿ ತಲಾಖ್ ಅನ್ನು ಅಪರಾಧ ಎಂದು ಘೋಷಿಸುವ ಮಸೂದೆ, ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವಾರು ಮಸೂದೆಗಳನ್ನು ಸರ್ಕಾರ ಮಂಡಿಸುವ ನಿರೀಕ್ಷೆ ಇದೆ.

Follow Us:
Download App:
  • android
  • ios