ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಕೇಂದ್ರ ರಕ್ಷಣ ಸಚಿವ ಮನೋಹರ್ ಪರ್ರಿಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಣಜಿ (ಮಾ.13): ಗೋವಾದ ಮುಂದಿನ ಮುಖ್ಯಮಂತ್ರಿಯಾಗಿ ಮನೋಹರ್ ಪರ್ರಿಕರ್ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ 15 ದಿನಗಳೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾ ಮೃದುಲಾ ಸಿನ್ಹಾ, ಪರ್ರಿಕರ್’ಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಕೇಂದ್ರ ರಕ್ಷಣ ಸಚಿವ ಮನೋಹರ್ ಪರಿಕ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
40 ಸದಸ್ಯರುಳ್ಳ ಗೋವಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13 ಸ್ಥಾನಗಳಿಸಿದರೆ, ಕಾಂಗ್ರೆಸ್ 17 ಸ್ಥಾನ ಗಳಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಪರಿಕ್ಕರ್ ಮುಖ್ಯಮಂತ್ರಿ ಆಗುವುದಾದರೆ ತಲಾ ಮೂರು ಸ್ಥಾನ ಗೆದ್ದಿರುವ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ ಮತ್ತು ಗೋವಾ ವಿಕಾಸ್ ಪಕ್ಷ, ಓರ್ವ ಪಕ್ಷೇತರ ಶಾಸಕ ಕೂಡ ಬೆಂಬಲ ನೀಡುವುದಾಗಿ ಘೋಷಿಸಿದ್ದವು. ಅಲ್ಲದೆ ಕಾಂಗ್ರೆಸ್ ಬಂಡಾಯ ಶಾಸಕರು ಕೂಡ ಬೆಂಬಲಿಸುವುದಾಗಿ ತಿಳಿಸಿದ್ದರು.
