ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ  ಪಾರ್ವತಮ್ಮ ರಾಜ್ ಕುಮಾರ್,  ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು(ಮಾ.08): ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್, ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಲೆ ಸುತ್ತು ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಪಾರ್ವತಮ್ಮ ರಾಜ್ ಕುಮಾರ್ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಆರೋಗ್ಯ ಸಮಸ್ಯೆ ಉಲ್ಬಣವಾಗಿದ್ದು, ಮಧ್ಯರಾತ್ರಿ 12.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಯಿಯ ಅನಾರೋಗ್ಯದ ವಿಚಾರ ತಿಳಿದ ರಾಘವೇಂದ್ರ ರಾಜ್ ಕುಮಾರ್ ತಡರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.