ಹಿರಿಯ ನಿರ್ಮಾಪಕಿ, ಡಾ. ರಾಜ್'ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್‍ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು(ಮೇ.31): ಹಿರಿಯ ನಿರ್ಮಾಪಕಿ, ಡಾ. ರಾಜ್'ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್‍ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್'ಕುಮಾರ್ ಅವರನ್ನು ಕಳೆದ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಚಾರ ತಿಳಿದ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆ 04.40ಕ್ಕೆ ಚಿಕಿತ್ಸೆ ಸ್ಪಂದಿಸದ 'ರಾಜಮಾತೆ' ಪಾರ್ವತಮ್ಮ ಇಹಲೋಕ ತ್ಯಜಿಸಿದ್ದಾರೆ.

ಕುಟುಂಬಸ್ಥರ ಇಚ್ಛೆಯಂತೆ ಕಂಠೀರವ ಸ್ಟುಡಿಯೋದಲ್ಲಿ ರಾಜ್ ಸಮಾಧಿ ಪಕ್ಕದಲ್ಲೇ ಪಾರ್ವತಮ್ಮ ರಾಜ್'ಕುಮಾರ್ ಅಂತ್ಯಸಂಸ್ಕಾರ ನಡೆಯಲ