ಪಾರ್ವತಮ್ಮ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದು ಅವರನ್ನು ವಿವಿಧ ಪರೀಕ್ಷೆಗೊಳಪಡಿಸಲಾಗಿದ್ದು ವರದಿಗಳನ್ನು ನಿರೀಕ್ಷಿಸಲಾಗಿದೆ. ಫಿಸಿಶಿಯನ್‌ ಡಾ. ಸಂಜಯ್‌ ಕುಲಕರ್ಣಿ ನೇತೃತ್ವದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು, ಮೂರು ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡುವುದಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಅವರನ್ನು ಸೋಮವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ವಿವಿಧ ವೈದ್ಯಕೀಯ ಪರೀಕ್ಷೆಗೊಳ ಪಡಿಸಲಾಗಿದೆ. ವೈದ್ಯಕೀಯ ಪರೀಕ್ಷೆಗಳ ವರದಿ ಬಂದ ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪಾರ್ವತಮ್ಮ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದು ಅವರನ್ನು ವಿವಿಧ ಪರೀಕ್ಷೆಗೊಳಪಡಿಸಲಾಗಿದ್ದು ವರದಿಗಳನ್ನು ನಿರೀಕ್ಷಿಸಲಾಗಿದೆ. ಫಿಸಿಶಿಯನ್ ಡಾ. ಸಂಜಯ್ ಕುಲಕರ್ಣಿ ನೇತೃತ್ವದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು, ಮೂರು ದಿನಗಳ ಬಳಿಕ ಅವರನ್ನು ಬಿಡುಗಡೆ ಮಾಡುವುದಾಗಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ‘ಕನ್ನಡಪ್ರಭ'ಕ್ಕೆ ತಿಳಿಸಿದರು. ನಿಯಮಿತವಾದ ಕೆಲವು ಪರೀಕ್ಷೆಗಾಗಿ ಅವರನ್ನು ದಾಖಲು ಮಾಡಿ ಕೊಳ್ಳಲಾಗಿದೆ. ಆರೋಗ್ಯ ಸ್ಥಿರವಾಗಿದ್ದು ಯಾವುದೇ ಆತಂಕದ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿರುವುದಾಗಿ ಡಾ. ರಾಜ್ ಕುಟುಂಬ ತಿಳಿಸಿದೆ. ಪಾರ್ವತಮ್ಮ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು ಸೋಮವಾರ ತುಸು ದಣಿದಂತೆ ಕಂಡು ಬಂದರು ಎನ್ನಲಾಗಿದೆ.
ಅಜ್ಜಿ (ಪಾರ್ವತಮ್ಮ ರಾಜ್ಕುಮಾರ್) ಆರಾಮವಾಗಿದ್ದಾರೆ. ಅವರಿಗೆ ಯಾವುದೇ ಸಮಸ್ಯೆ ಇಲ್ಲ. ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅಗತ್ಯ ಪರೀಕ್ಷೆಗಳನ್ನು ಮಾಡಿದ್ದು ಆರೋಗ್ಯ ಸ್ಥಿತಿ ಸಹಜವಾಗಿದೆ ಎಂದು ತಿಳಿಸಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ.
- ವಿನಯ್ ರಾಜ್'ಕುಮಾರ್, ಡಾ.ರಾಜ್ ಮೊಮ್ಮಗ
