ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಧ್ವನಿಯಿಲ್ಲದವರಿಗೆ ಧ್ವನಿಯಾಗಿದ್ದ ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿದ್ದ ನಿರ್ಭೀತ ಪತ್ರಕರ್ತೆಯ ದ್ವನಿಯನ್ನು ಅಡಗಿಸಲು ಬರ್ಬರವಾಗಿ ಹತ್ಯೆಗೈಯಲಾಗಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸಿದೆ.
ಧ್ವನಿಯಿಲ್ಲದವರಿಗೆ ಧ್ವನಿಯಾಗಿದ್ದ ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿದ್ದ ನಿರ್ಭೀತ ಪತ್ರಕರ್ತೆಯ ದ್ವನಿಯನ್ನು ಅಡಗಿಸಲು ಬರ್ಬರವಾಗಿ ಹತ್ಯೆಗೈಯಲಾಗಿದೆ, ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜರಾಜೆಶ್ವರಿ ನಗರದಲ್ಲಿರುವ ಅವರ ನಿವಾಸದ ಮೇಲೆ ಇಂದು ಸಂಜೆ ಸುಮಾರು 6.30ರ ಹೊತ್ತಿಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ಸಂಜೆ ಮನೆ ಬಾಗಿಲನ್ನು ತಟ್ಟಿದ್ದಾರೆನ್ನಲಾಗಿದ್ದು, ಗೌರಿ ಬಾಗಿಲು ತೆರೆದಾಗ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗೌರಿ ತಕ್ಷಣ ಕುಸಿದು ಬಿದ್ದಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
