ಶೀಘ್ರದಲ್ಲಿಯೇ ಸಾಹಿತಿಗಳು, ವಿವಿಧ ಸಮಾಜದ ಮುಖಂಡರನ್ನು ಸೇರಿಸಿಕೊಂಡು ಸಭೆ ನಡೆಸಲಾಗುತ್ತಿದೆ. ಶಾಂತಿ ಸಭೆ ನಡೆಸುವ ದಿನಾಂಕ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಬಿ.ಎಂ. ಫಾರೂಕ್ ಅವರು ನಿಗದಿ ಮಾಡಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬೆಂಗಳೂರು(ಜು.10): ದಕ್ಷಿಣ ಕನ್ನಡದಲ್ಲಿ ಶಾಂತಿ ಕದಡಿ ಅಶಾಂತಿ ತಲೆದೋರಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಅಲ್ಲಿ ಶಾಂತಿ ಸಭೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ಸಾಹಿತಿಗಳು, ವಿವಿಧ ಸಮಾಜದ ಮುಖಂಡರನ್ನು ಸೇರಿಸಿಕೊಂಡು ಸಭೆ ನಡೆಸಲಾಗುತ್ತಿದೆ. ಶಾಂತಿ ಸಭೆ ನಡೆಸುವ ದಿನಾಂಕ ಕುರಿತು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಬಿ.ಎಂ. ಫಾರೂಕ್ ಅವರು ನಿಗದಿ ಮಾಡಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೋಮು ಗಲಭೆಗಳಂತಹ ಪ್ರಕರಣಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯಕ್ಕಿಂತ ಶಾಂತಿ ಕಾಪಾಡಲು ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೂಕ್ಷ್ಮ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ವೇಳೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಇದನ್ನು ಅರಿತುಕೊಂಡು ನಡೆದುಕೊಳ್ಳಬೇಕು ಎಂದು ಹೇಳಿದರು.