ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಸಮಸ್ಯೆ ಎದುರಿಸುತ್ತಿದ್ದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ.
ಉಡುಪಿ: ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಸಮಸ್ಯೆ ಎದುರಿಸುತ್ತಿದ್ದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ.
ಇತ್ತೀಚೆಗೆ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸ್ವಾಮೀಜಿಯವರು ಆರೋಗ್ಯ ತಪಾಸಣೆಗೆಂದು ಬುಧವಾರ ಆಸ್ಪತ್ರೆಗೆ ತೆರಳಿದ್ದ ಸಂದರ್ಭ, ವೈದ್ಯರು ಸ್ಕ್ಯಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ.
ಸ್ವಾಮೀಜಿಯವರು ಇನ್ನೂ 2 ದಿನ ಆಸ್ಪತ್ರೆಯಲ್ಲೇ ಉಳಿಯುವ ಸಾಧ್ಯತೆಯಿದೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ, ಆತಂಕ ಬೇಡ ಎಂದು ಮಠದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
