ಇಟಾನಗರ (ಸೆ.16): ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ. ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ 43 ಶಾಸಕರು ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ (ಪಿಪಿಎ)ಗೆ ಸೇರ್ಪಡೆಯಾಗಿದ್ದಾರೆ.
60 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 47, ಬಿಜೆಪಿ 11, ಇಬ್ಬರು ಪಕ್ಷೇತರ ಶಾಸಕರಿದ್ದಾರೆ. ಕಾಂಗ್ರೆಸ್ ಶಾಸಕರಲ್ಲಿ ನಬಮ್ ತುಕಿ ಹೊರತುಪಡಿಸಿ ಸಿಎಂ ಮತ್ತು 43 ಶಾಸಕರು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.
ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ (ಪಿಪಿಎ) ಬಿಜೆಪಿ ಕಣ್ ಸನ್ನೆಯಲ್ಲಿ ಕೆಲಸ ಮಾಡುತ್ತಿರುವ ಪಕ್ಷ. ಸಿಎಂ ಪೆಮಾ ಖಂಡು ಕಾಂಗ್ರೆಸ್ ಶಾಸಕರೊಂದಿಗೆ ಆ ಪಕ್ಷಕ್ಕೆ ಸೇರಿದ್ದಾರೆ.
ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರವಾಗಿದೆ. ಒಮ್ಮೆಲೆ ಪಕ್ಷದ ಇಷ್ಟು ಶಾಸಕರು ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಶಾಕ್ ಆಗಿ ಪರಿಣಮಿಸಿದೆ. ಜೊತೆಗೆ ದೇಶದಲ್ಲಿ ಅಧಿಕಾರದಲ್ಲಿದ್ದ ಮತ್ತೊಂದು ರಾಜ್ಯವನ್ನು ಕಾಂಗ್ರೆಸ್ ಕಳೆದುಕೊಂಡಿದೆ.
