ದೇಶಾದ್ಯಂತ ಇಂದು ಶಿವರಾತ್ರಿ ಹಬ್ಬ ಸಂಭ್ರಮ ಮನೆಮಾಡಿದೆ.  ದೇಶದ  ಎಲ್ಲಾ ಶಿವದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ  ವಿಶೇಷ ಪೂಜೆ ನೆರವೇರುತ್ತಿದೆ. 

ಬೆಂಗಳೂರು(ಫೆ.24): ದೇಶಾದ್ಯಂತ ಇಂದು ಶಿವರಾತ್ರಿ ಹಬ್ಬ ಸಂಭ್ರಮ ಮನೆಮಾಡಿದೆ. ದೇಶದ ಎಲ್ಲಾ ಶಿವದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡೀ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯಲಿದೆ. ಶಿವ ಪಂಚಾಕ್ಷರಿ ಮಂತ್ರ "ಓಂ ನಮ: ಶಿವಾಯ", ಹರ ಹರ ಮಹಾದೇವ, ಶಂಭೋ ಶಂಕರ...ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ.

ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ.