ಅದ್ದೂರಿಯಾಗಿ ದಸರಾ ಆಚರಣೆ ವೇಳೆಯಲ್ಲಿ ಪಕ್ಕದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, 20 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ನಿಜಮಾಬಾದ್'​ನಲ್ಲಿ ನಡೆದಿದೆ.

ತೆಲ್ಲಂಗಾನ(ಅ.01): ಅದ್ದೂರಿಯಾಗಿ ದಸರಾ ಆಚರಣೆ ವೇಳೆಯಲ್ಲಿ ಪಕ್ಕದ ಕಟ್ಟಡ ಕುಸಿದು ಇಬ್ಬರು ಮೃತಪಟ್ಟು, 20 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ನಿಜಮಾಬಾದ್'​ನಲ್ಲಿ ನಡೆದಿದೆ.

ದಸರಾ ಆಚರಣೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕಾರ್ಯಕ್ರಮ ನೋಡರು ಅಕ್ಕಪಕ್ಕದ ಕಟ್ಟದ ಮೇಲೆ ಜನರು ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ.

ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.