ಜವಾಬ್ದಾರಿಯುತ ಪಕ್ಷವಾಗಿರುವ ಡಿಎಂಕೆಯು ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶ ಒದಗಿ ಬಂದರೂ ಜನರ ಆಕಾಂಕ್ಷೆಗಳು ಹಾಗೂ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ತೆಗೆದುಕೊಳ್ಳಲಾಗುತ್ತದೆ' ಎಂದಿದ್ದಾರೆ
ಚೆನ್ನೈ(ಫೆ.05): ತಮಿಳುನಾಡಿನ ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಶಶಿಕಲಾ ನಟರಾಜನ್ ಬಗ್ಗೆ ಡಿಎಂಕೆ ಕಾರ್ಯಾಕಾರಿ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮಿಳು ನಾಡು ಜನತೆ 2016 ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರನ್ನು ಬಿಟ್ಟು ಶಶಿಕಲಾ ನಟರಾಜನ್ ಅವರಿಗಾಗಲಿ ಅಥವಾ ಪನ್ನೀರ್ ಸೆಲ್ವಂ ಅವರಿಗಾಗಲಿ ಅಧಿಕಾರ ನೀಡಿರಲಿಲ್ಲ. ಇದು ಪಕ್ಷದ ಮೇಲೆ ಪರಿಣಾಮ ಬೀರಬಹುದು ವಿನಾ ಆಡಳಿತದಲ್ಲಿ ಪರಿಣಾಮ ಬೀರುವ ಸಾಧ್ಯತೆ ಕಡಿಮೆಯಿದೆ ಎಂದಿದ್ದಾರೆ.
ಜವಾಬ್ದಾರಿಯುತ ಪಕ್ಷವಾಗಿರುವ ಡಿಎಂಕೆಯು ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶ ಒದಗಿ ಬಂದರೂ ಜನರ ಆಕಾಂಕ್ಷೆಗಳು ಹಾಗೂ ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿಯೇ ತೆಗೆದುಕೊಳ್ಳಲಾಗುತ್ತದೆ' ಎಂದು ತಿಳಿಸಿದ್ದಾರೆ.
ಕರಾಳ ದಿನ ಎಂದ ಕಾಂಗ್ರೆಸ್: ಶಶಿಕಲಾ ಮುಖ್ಯಮಂತ್ರಿಯಾಗಿರುವುದಕ್ಕೆ ಕಾಂಗ್ರೆಸ್ ಕೂಡ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯಾಗುವ ದಿನವನ್ನು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.
