ಬೆಂಗಳೂರು (ಏ.13): ಉಪಚುನಾವಣೆ ಫಲಿತಾಂಶವು ಜನರಿಗೆ, ಜನಪರ ಆಡಳಿತಕ್ಕೆ ಸಂದ ಯಶಸ್ಸು. ಸರ್ಕಾರದ ಕಾರ್ಯಕ್ರಮಗಳಿಗೆ, ಪಕ್ಷದ ಸಂಘಟಿತ ಚುನಾವಣಾ ಹೋರಾಟಕ್ಕೆ ಸಿಕ್ಕ ಮನ್ನಣೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಜಯಶೀಲರಾದ ಪಕ್ಷದ ಅಭ್ಯರ್ಥಿಗಳಾದ ಕಳಲೆ ಕೇಶವಮೂರ್ತಿ ಹಾಗೂ ಗೀತಾ ಮಹದೇವಪ್ರಸಾದ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಮತದಾರರಿಗೂ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.ಜಾತಿ,ಧರ್ಮ,ಹಣ-ಇಂತಹ ಯಾವುದೇ ದೌರ್ಬಲ್ಯಕ್ಕೆ ಬಲಿಯಾಗದೆ ನಮ್ಮ ಸರ್ಕಾರದ ಸಾಧನೆ, ಪಕ್ಷದ ಸಿದ್ಧಾಂತ ಮತ್ತು ಅಭ್ಯರ್ಥಿಗಳ ಅರ್ಹತೆ ಗುರುತಿಸಿ ಗೆಲ್ಲಿಸಿದ ಮತದಾರರಿಗೆ ಶರಣು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…