ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಸಾವಿಗೆ ಸೈದ್ಧಾಂತಿಕ ಸಂಘರ್ಷಗಳೇ ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಗೌರಿ ಲಂಕೇಶ್ ಹತ್ಯೆಗೆ ಆರ್'ಎಸ್'ಎಸ್ ಹಾಗೂ ಬಿಜೆಪಿಯೇ ಕಾರಣ ಎಂದು ತಮ್ಮ ಪಕ್ಷ ಎಲ್ಲಿಯೂ ಹೇಳಿಲ್ಲ ಹೇಳಿದ್ದಾರೆ.

ನವದೆಹಲಿ (ಸೆ.09): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಸಾವಿಗೆ ಸೈದ್ಧಾಂತಿಕ ಸಂಘರ್ಷಗಳೇ ಕಾರಣ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಗೌರಿ ಲಂಕೇಶ್ ಹತ್ಯೆಗೆ ಆರ್'ಎಸ್'ಎಸ್ ಹಾಗೂ ಬಿಜೆಪಿಯೇ ಕಾರಣ ಎಂದು ತಮ್ಮ ಪಕ್ಷ ಎಲ್ಲಿಯೂ ಹೇಳಿಲ್ಲ ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಹಿಂದೆ ಆರ್'ಎಸ್'ಎಸ್ ಹಾಗೂ ಬಿಜೆಪಿ ಇದೆ ಎಂದು ಯಾವತ್ತೂ ಹೇಳಿಲ್ಲ. ಆದರೆ ಸೈದ್ಧಾಂತಿಕ ಸಂಘರ್ಷವಿತ್ತು. ಹೀಗಾಗಿಯೇ ಅವರ ಹತ್ಯೆಯಾಯಿತು ಎಂದು ಖರ್ಗೆ ಹೇಳಿದ್ದಾರೆ. ಶೀಘ್ರದಲ್ಲಿಯೇ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಜನರು ಒಂದಾಗಬೇಕು. ಹಂತಕರಿಗೆ ಸರಿಯಾದ ಪಾಠ ಕಲಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರೊಂದಿಗೆ ನಾನು ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.