Asianet Suvarna News Asianet Suvarna News

ನೀರಿನ ವಿಚಾರದಲ್ಲಿ ಜನರಿಗೆ ಯಾವುದೇ ತೊಂದರೆಯಾಗಬಾರದು, ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಮುಂಬರುವ ಎರಡು ತಿಂಗಳಲ್ಲಿ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

People Should Not Face Drinking Water Problem Says Minister

ಕೊಪ್ಪಳ (ಮಾ.19): ಬರ ಪರಿಹಾರದ ಕುರಿತು ಗ್ರಾಮೀಣಾಭಿವೃದ್ದಿ ಸಚಿವ ಎಚ್.ಕೆ.ಪಾಟೀಲ್ ಇಂದು ಕೊಪ್ಪಳದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಮುಂಬರುವ ಎರಡು ತಿಂಗಳಲ್ಲಿ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆ ಬಳಿಕ ಮಾತನಾಡಿದ ಸಚಿವ ಎಚ್​.ಕೆ.ಪಾಟೀಲ್, ಇತ್ತೀಚಿಗೆ ಸುವರ್ಣ ನ್ಯೂಸ್​ ಸ್ಟುಡಿಯೋಗೆ ಹೋಗಿದ್ದ ಸಂದರ್ಭದಲ್ಲಿ ನನಗೆ ಹಿರೇಸಿಂದೋಗಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭವಾಗದಿರುವ ಕುರಿತು ಗಮನಕ್ಕೆ ತಂದರು. ಇದಾದ 48 ಗಂಟೆಯೊಳಗೆ ನೀರಿನ ಘಟಕ ಆರಂಭ ಮಾಡಲಾಯಿತು. ಹೀಗೆ ಎಲ್ಲಿಯಾದರೂ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

Latest Videos
Follow Us:
Download App:
  • android
  • ios