ಹೊಳಲ್ಕೆರೆ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದವು.  ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ನುಗ್ಗಿ 10ಕ್ಕೂ ಹೆಚ್ಚು ಲಾರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇದೇ ಸಂದರ್ಭದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಮಾಲಿಕ ಹನುಮಂತಪ್ಪರವರನ್ನೂ ಥಳಿಸಿದ್ದಾರೆ ಹಾಗೂ ಕಾರ್ಮಿಕರ ಮೇಲೂ ಹಲ್ಲೆ ನಡೆಸಿದ್ದಾರೆ.

ಚಿತ್ರದುರ್ಗ(ಜ.30): ಕಲ್ಲು ಗಣಿಗಾರಿಕೆಯಿಂದ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮವಾಗಿ ಆಕ್ರೋಶಗೊಂಡ ಗ್ರಾಮಸ್ಥರು 10ಕ್ಕೂ ಹೆಚ್ಚು ಲಾರಿಗಳಿಗೆ ಬೆಂಕಿ ಹಚ್ಚಿದ್ದಾರೆ.

Add Asianetnews Kannada as a Preferred SourcegooglePreferred

ಹೊಳಲ್ಕೆರೆ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದವು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ನುಗ್ಗಿ 10ಕ್ಕೂ ಹೆಚ್ಚು ಲಾರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇದೇ ಸಂದರ್ಭದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಮಾಲಿಕ ಹನುಮಂತಪ್ಪರವರನ್ನೂ ಥಳಿಸಿದ್ದಾರೆ ಹಾಗೂ ಕಾರ್ಮಿಕರ ಮೇಲೂ ಹಲ್ಲೆ ನಡೆಸಿದ್ದಾರೆ.

ಸದ್ಯ ಇಲ್ಲಿನ ಪರಿಸ್ಥಿತಿ ನಿಯಂತ್ರಿಸಲು KSRP ತುಕಡಿಯನ್ನು ನೇಮಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.