ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು(ಮಾ.20): ಕೆಎಎಸ್ ಅಧಿಕಾರಿ ಕೊಲೆಗೆ ಯತ್ನ ನಡೆಸಿರುವ ಘಟನೆ ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ನಾಲ್ಕೈದು ಮಂದಿ ದುಷ್ಕರ್ಮಿಗಳು ಕೆಎಎಸ್ ಅಧಿಕಾರಿ ಜಗದೀಶ್ ಅವರ ಹತ್ಯೆಗೆ ಯತ್ನಿಸಿದ್ದು, ಗಾಯಗೊಂಡ ಅವರನ್ನು ರಾಜಾಜಿನಗರದ ಪನೇಶಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
