ಡೀಸೆಲ್ ಬೆಲೆ ಇಳಿಕೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸೋಮವಾರ ದಿಂದ ಎರಡು ದಿನ (ಅ.9-10) ಮುಷ್ಕರ ನಡೆಸಲಿದ್ದಾರೆ.

ನವದೆಹಲಿ(ಅ.08): ಡೀಸೆಲ್ ಬೆಲೆ ಇಳಿಕೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸೋಮವಾರ ದಿಂದ ಎರಡು ದಿನ (ಅ.9-10) ಮುಷ್ಕರ ನಡೆಸಲಿದ್ದಾರೆ.

ದೇಶಾದ್ಯಂತ ಒಂದೇ ದರದ ಡೀಸೆಲ್ ಸಿಗುವಂತಾಗಲು, ಡೀಸೆಲ್ ಅನ್ನು ಜಿಎಸ್‌'ಟಿ ವ್ಯಾಪ್ತಿಗೆ ತರುವುದು ಸೇರಿದಂತೆ, ಇತರ ಕೆಲವು ವಿಷಯಗಳಿಗೂ ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ. ಅಖಿಲ ಭಾರತ ಮೋಟಾರ್ ಟ್ರಾನ್ಸ್‌'ಪೋರ್ಟ್ ಕಾಂಗ್ರೆಸ್ ಮತ್ತಿತರ ಸಂಘಟನೆಗಳು ಮುಷ್ಕರ ಘೋಷಣೆ ಮಾಡಿ ದೇಶಾದ್ಯಂತ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ್ತು ಮಂಗಳವಾರ ರಾತ್ರಿ ೮ ಗಂಟೆಗೆ ‘ರಸ್ತೆ ತಡೆ’ ನಡೆಸಿ ಪ್ರತಿಭಟಿಸಲು ಸಂಘಟನೆಗಳು ನಿರ್ಧರಿಸಿವೆ.

ತಮ್ಮ ಬೇಡಿಕೆಗಳಿಗೆ ಸರ್ಕಾರ ಪ್ರತಿಕ್ರಿಯಿಸದಿದ್ದಲ್ಲಿ, ದೀಪಾವಳಿ ನಂತರ ಅನಿರ್ಧಿಷ್ಠಾವಧಿ ‘ರಸ್ತೆ ತಡೆ’ ನಡೆಸಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ನಡುವೆ ಪೆಟ್ರೋಲಿಯಂ ಉತ್ಪನ್ನ ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಮತ್ತು ಉತ್ತಮ ಕಮಿಷನ್ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಂದು ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಡೀಲರ್‌'ಗಳ ಪ್ರತಿನಿಧಿಸುವ ಯುನೈಟೆಡ್ ಪೆಟ್ರೋಲಿಯಂ ಫ್ರಂಟ್(ಯುಪಿಎಫ್) ಹೇಳಿದೆ.