ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 14, Jul 2018, 11:42 AM IST
Petrol Diesel Prices Hiked In Karnataka
Highlights

ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಹಣ ಕಾಸು ಇಲಾಖೆ ಆದೇಶ ಹೊರಡಿಸಿದೆ. 

ಬೆಂಗಳೂರು :  ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಪೆಟ್ರೋಲ್ ಪ್ರತಿ ಲೀಟರ್‌ಗೆ 1.14 ರು. ಹಾಗೂ ಡೀಸೆಲ್ 1.12 ರು. ಹೆಚ್ಚಳ ಮಾಡಿ ಹಣ ಕಾಸು ಇಲಾಖೆ ಆದೇಶ ಹೊರಡಿಸಿದ್ದು, ಪರಿಷ್ಕೃತ ದರಗಳು ಶುಕ್ರವಾರ ಮಧ್ಯ ರಾತ್ರಿಯಿಂದಲೇ ಜಾರಿಯಾಗಿವೆ. 

ಕುಮಾರಸ್ವಾಮಿ ಅವರು ಗುರುವಾರ ಉಭಯ ಸದನಗಳಲ್ಲಿ ಅಂಗೀಕಾರ ಪಡೆದ ಬಜೆಟ್ ನಲ್ಲಿ ಪೆಟ್ರೋಲ್ ತೆರಿಗೆ ದರವನ್ನು ಶೇ.30 ರಿಂದ 32ಕ್ಕೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಶೇ.19ರಿಂದ 21ಕ್ಕೆ ಹೆಚ್ಚಳ ಮಾಡಿದ್ದಾರೆ. 

ಹೀಗಾಗಿ ಪೆಟ್ರೋಲ್ 1.14 ರು. ಹಾಗೂ ಡೀಸೆಲ್ 1.12 ರು. ಪ್ರತಿ ಲೀಟರ್‌ಗೆ ಹೆಚ್ಚಳವಾಗಲಿದೆ. ಈ ಬಗ್ಗೆ ಶುಕ್ರವಾರ ಆದೇಶ ಹೊರಡಿಸಿರುವ ಹಣಕಾಸು ಇಲಾಖೆ ಶುಕ್ರವಾರ ಮಧ್ಯರಾತ್ರಿಯಿಂದಲೇ ನೂತನ ದರಗಳು ಅನ್ವಯವಾಗಲಿವೆ ಎಂದು ಹೇಳಿದೆ.

loader