ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬಗ್ಗೆ ಸರ್ಕಾರ ಕಳವಳ

Petrol, diesel prices hiked will Centre budge on fuel prices
Highlights

ಗ್ರಾಹಕರಿಗೆ ಹೊರೆಯಾಗುತ್ತಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸತತ ಏರಿಕೆ ಕುರಿತು ಸರ್ಕಾರಕ್ಕೆ ಕಳವಳವಿದೆ ಎಂದು ಕೇಂದ್ರ ತೈಲ ಸಚಿವ ಧಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ನವದೆಹಲಿ: ಗ್ರಾಹಕರಿಗೆ ಹೊರೆಯಾಗುತ್ತಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸತತ ಏರಿಕೆ ಕುರಿತು ಸರ್ಕಾರಕ್ಕೆ ಕಳವಳವಿದೆ ಎಂದು ಕೇಂದ್ರ ತೈಲ ಸಚಿವ ಧಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದರು. ಆದಾಗ್ಯೂ, ಬೆಲೆ ನಿಯಂತ್ರಣಕ್ಕೆ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡುವ ಕುರಿತು ಯಾವುದೇ ಸುಳಿವು ನೀಡಲಿಲ್ಲ. ಆದರೆ, ನಾವು ಹಣಕಾಸು ಸಮತೋಲನ ಕಾಯ್ದುಕೊಳ್ಳಬೇಕು ಮತ್ತು ಅದೇ ವೇಳೆ ಗ್ರಾಹಕರ ಹಿತವನ್ನೂ ಕಾಯಬೇಕು ಎಂದು ಹೇಳಿದರು.

ಗ್ರಾಹಕರ ಮೇಲಿನ ಹೊರೆಯನ್ನು ತಗ್ಗಿಸಲು ರಾಜ್ಯಗಳು ಪೆಟ್ರೋಲ್‌ ಮತ್ತು ಡೀಸೆಲ್‌ನ ವ್ಯಾಟ್‌ ದರ ಕಡಿಮೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಕಳೆದ ವರ್ಷಾಂತ್ಯದಿಂದ ದೈನಂದಿನ ಆಧಾರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ನಿರ್ಧಾರವಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಅತ್ಯಧಿಕ ಏರಿಕೆ ಕಂಡು, ಕೇಂದ್ರಕ್ಕೆ ಮುಜುಗರವನ್ನುಂಟು ಮಾಡಿದೆ.

loader