ದೈನಂದಿನ ದರ ಏರಿಳಿಕೆ ನೀತಿ ಜಾರಿಗೆ ಬಂದ ಬಳಿಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೀಘ್ರವೇ ಜೇಬಿಗೆ ಇನ್ನಷ್ಟು ಹೊರೆಯಾಗುವ ಸಾಧ್ಯತೆ ಇದೆ.

ನವದೆಹಲಿ: ದೈನಂದಿನ ದರ ಏರಿಳಿಕೆ ನೀತಿ ಜಾರಿಗೆ ಬಂದ ಬಳಿಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೀಘ್ರವೇ ಜೇಬಿಗೆ ಇನ್ನಷ್ಟು ಹೊರೆಯಾಗುವ ಸಾಧ್ಯತೆ ಇದೆ.

ಕಾರಣ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 2 ವರ್ಷಗಳ ಗರಿಷ್ಠ ಮಟ್ಟ ತಲುಪಿದೆ. ನ.3ರಂದು ಪ್ರತಿ ಬ್ಯಾರಲ್ ಕಚ್ಚಾ ತೈಲದ ಬೆಲೆ 3815 ರು.ಗೆ ತಲುಪಿತ್ತು. ಇದು 2015ರ ಜುಲೈ ಬಳಿಕದ ಗರಿಷ್ಠ ಪ್ರಮಾಣವಾಗಿದೆ.

ಜೊತೆಗೆ ಮುಂದಿನ ದಿನಗಳಲ್ಲಿ ಕಚ್ಚಾತೈಲ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ತೈಲ ಬೆಲೆ ಮತ್ತಷ್ಟು ಕೈಸುಡುವುದು ಖಚಿತ ಎನ್ನಲಾಗಿದೆ.