ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಟಿಪ್ಪು ಸುಲ್ತಾನ್ ವೇ಼ಷ ಧರಿಸಿರುವ ಫೋಟೋ ಇದೀಗ ವೈರಲ್ ಆಗಿದ್ದು ಕೇಸರಿ ಪಕ್ಷಕ್ಕೆ ಮುಜುಗರವಾಗಿ ಪರಿಣಮಿಸಿದೆ.

ಬೆಂಗಳೂರು (ಅ.23): ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಟಿಪ್ಪು ಸುಲ್ತಾನ್ ವೇ಼ಷ ಧರಿಸಿರುವ ಫೋಟೋ ಇದೀಗ ವೈರಲ್ ಆಗಿದ್ದು ಕೇಸರಿ ಪಕ್ಷಕ್ಕೆ ಮುಜುಗರವಾಗಿ ಪರಿಣಮಿಸಿದೆ.

Add Asianetnews Kannada as a Preferred SourcegooglePreferred

ಈ ಫೋಟೋದಲ್ಲಿ ಬಿಜೆಪಿ ನಾಯಕರಾದ ಜಗದೇಶ್ ಶೆಟ್ಟರ್ , ಆರ್ ಅಶೋಕ್ ಟಿಪ್ಪು ಸುಲ್ತಾನನಂತೆ ವೇಷ ಧರಿಸಿ, ಕೈಯಲ್ಲಿ ಖಡ್ಗ ಹಿಡಿದು ಪೋಸ್ ನೀಡಿರುವ ಫೋಟೋ ವೈರಲ್ ಆಗಿದೆ. ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಅನಂತ್ ಕುಮಾರ್, ಟಿಪ್ಪು ಜಯಂತಿ ಆಚರಣೆ ಮಾಡಲು ನಿರಾಕರಿಸಿದ್ದು ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಹಾಕಬೇಡಿ ಎಂದು ಹೇಳಿದ್ದರು. ಜೊತೆಗೆ ಸಾಕಷ್ಟು ಬಿಜೆಪಿ ನಾಯಕರು ಕೂಡಾ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರ ಈ ಫೋಟೋ ಕಾಂಗ್ರೆಸ್’ಗೆ ಇದೀಗ ಅಸ್ತ್ರವಾಗಿದೆ. ಇದು ಬಿಜೆಪಿಯ ಆಷಾಢಭೂತಿತನ ತೋರಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.