ತ್ರಿವರ್ಣ ಧ್ವಜದಲ್ಲಿ ಮಸೀದಿ: ಯುಪಿಯಲ್ಲಿ ಮುಸ್ಲಿಮರ ವಿರುದ್ಧ ಹಿಂದೂಗಳ ದೂರು!

ಶಹಜಹಾನ್‌ಪುರ[ಡಿ.22]: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿನ ಪುರಾಣ್‌ನಗರದಲ್ಲಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಜುಲಸ್‌-ಇ-ಗೌಸಿಯಾ ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ದೂರು ನೀಡಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಾಗರಣ್‌ ಮಂಚ್‌ ಮತ್ತು ಅಖಿಲ ಭಾರತೀಯ ಹಿಂದೂ ಮಹಾಸಭಾ ನೀಡಿದ ದೂರಿನ ಮೇರೆಗೆ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಮಸೀದಿ ಫೋಟೋ ಹಾಕಲಾಗಿತ್ತು. ಇದು ದೇಶದ ಧ್ವಜಕ್ಕೆ ಅಪಮಾನ ಮಾಡಿದಂತೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಈ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಸ್‌ಪಿ ಬಲೆಂದು ಭೂಷಣ್‌ ಸಿಂಗ್‌ ಹೇಳಿದ್ದಾರೆ.