ಚೆನ್ನೈ (ಅ.03): ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯದ ಬಗ್ಗೆ ಹಲವು ವದಂತಿಗಳು ಹರಡುತ್ತಿರುವ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ತಿಳಿಯಲು ಮದ್ರಾಸ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ರಾಮಸ್ವಾಮಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಂಪುಟ ಸದಸ್ಯರೊಂದಿಗೆ ಸಭೆ ನಡೆಸುತ್ತಿರುವ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ಜೊತೆ ಇರುವ ಫೋಟೋವನ್ನು ಬಿಡುಗಡೆ ಮಾಡಿ ಎಂದು ರಾಮಸ್ವಾಮಿ ವಿನಂತಿಸಿಕೊಂಡಿದ್ದಾರೆ.
ತಮಿಳುನಾಡು ಜನರು ಅಮ್ಮಾ ಆರೋಗ್ಯದ ಬಗ್ಗೆ ತಿಳಿಯಲು ಉತ್ಸುಕರಾಗಿದ್ದಾರೆ. ರಾಜ್ಯಪಾಲ ಸಿ. ವಿದ್ಯಾಸಾಗರ್ ಕೇಂದ್ರ ಸಚಿವ ರಾಧಾಕೃಷ್ಣನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆದರೆ ಅಮ್ಮಾ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲವೆಂದು ಅರ್ಜಿದಾರರು ಹೇಳಿದ್ದಾರೆ.
ನಾಳೆ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆಯಿದೆ.
