ಅರುಣ್ ಜೇಟ್ಲಿ ಅನಾರೋಗ್ಯ ಹಿನ್ನೆಲೆಯಲ್ಲಿ ಹಂಗಾಮಿ ಹಣಕಾಸು ಖಾತೆಯನ್ನು ಹೆಚ್ಚುವರಿಯಾಗಿ ಕೇಂದ್ರ ರೈಲ್ವೇ ಸಚಿವರಿಗೆ ವಹಿಸಲಾಗಿದೆ.

ನವದೆಹಲಿ, [ಜ.23]: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಹಣಕಾಸು ಖಾತೆಯನ್ನು ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.

ಕೇಂದ್ರ ಬಜೆಟ್‍ಗೆ ಕೆಲವೇ ದಿನಗಳು ಬಾಕಿ ಇದೆ. ಇದ್ರಿಂದ ಹಣಕಾಸು ಖಾತೆಯ ಜವಾಬ್ದಾರಿಯನ್ನ ಪಿಯೂಷ್ ಗೋಯಲ್ ಅವರಿಗೆ ವಹಿಸಲಾಗಿದೆ.

ಅರುಣ್‌ ಜೇಟ್ಲಿಗೆ ಕ್ಯಾನ್ಸರ್?: ಬಜೆಟ್ ಮಂಡನೆಗೂ ಅಲಭ್ಯ?

 ಅನಾರೋಗ್ಯದಿಂದ ಬಳಲುತ್ತಿರುವ ಅಣಕಾಸು ಸಚಿವ ಅರುಣ್ ಜೇಟ್ಲಿ ಅವರು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಪಿಯೂಷ್ ಗೋಯಲ್ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಅಧಿಕೃತ ಮಾಹಿತಿಯನ್ನು ನೀಡಿದೆ.

100 ಪರ್ಸೆಂಟ್ ನಿಮ್ಮೊಂದಿಗಿದ್ದೇವೆ: ಜೇಟ್ಲಿಗೆ ಹಾರೈಸಿದ ರಾಹುಲ್!

ಪಿಯೂಷ್ ಗೋಯಲ್ ಅವರು ಹಂಗಾಮಿ ಹಣಕಾಸು ಸಚಿವ ಸ್ಥಾನ ವಹಿಸಿಕೊಂಡಿರುವುದರಿಂದ ಈ ಬಾರಿಯ ಕೇಂದ್ರ ಬಜೆಟ್ ಮಂಡಿಸುವ ಸಾಧ್ಯತೆಗಳಿವೆ.