ಕೋಲ್ಕತಾ[ಜೂ.15]: ಜೈಶ್ರೀರಾಮ್‌ ಎಂದು ಘೋಷಣೆ ಕೂಗಿದ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ಬೆನ್ನಲ್ಲೇ, ಇಂಥ ಘೋಷಣೆ ಕೂಗುವುದನ್ನು ಮೂಲಭೂತ ಹಕ್ಕೆಂದು ಸಾರಬೇಕೆಂದು ಕೋರಿ ವಕೀಲ ಪಾರ್ಥ ಘೋಷ್‌ ಎನ್ನುವವರು ಕೋಲ್ಕತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆದರೆ ಈ ಅರ್ಜಿಯ ತ್ವರಿತ ವಿಚಾರಣೆಗೆ ನಿರಾಕರಿಸಿದ ನ್ಯಾಯಾಲಯ, ವಿಚಾರಣೆಯನ್ನು 4 ವಾರ ಮುಂದೂಡಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೋಗುವಾಗ ಜೈಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಕ್ಕೆ ಹಲವರನ್ನು ಬಂಧಿಸಲಾಗಿತ್ತು. ಈ ವಿಷಯ ಭಾರೀ ಚರ್ಚೆಗೆ ಗ್ರಾಸವಾಗಿತ್ತು.