ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಇಂದು ಭೇಟಿ ನೀಡಿದ್ದಾರೆ. ಸಾಕಷ್ಟು ಅಭಿವೃದ್ದಿಪರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನವದೆಹಲಿ (ಸೆ.22): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಇಂದು ಭೇಟಿ ನೀಡಿದ್ದಾರೆ. ಸಾಕಷ್ಟು ಅಭಿವೃದ್ದಿಪರ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಾದಾ-ಲಾಲ್ಪುರ್’ನಲ್ಲಿ ಕರಕುಶಲ ಉದ್ಯಮಿಗಳಿಗಾಗಿ ದೀನ್’ದಯಾಳ್ ಹಸ್ತಕಲಾ ಸಂಕುಲ ವ್ಯಾಪಾರ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಮ್’ನಗರ-ಸಾಮ್ನೆ ಘಾಟ್ ಸೇತುವೆ, ಬಲುವಾ ಘಾಟ್ ಸೇತುವೆ ಸೇರಿದಂತೆ 6 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
