ರಾಜ್ಯದ ಸಮಸ್ಯೆಗಳನ್ನು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ: ಎಚ್’ಡಿಕೆ

First Published 18, Jun 2018, 7:00 PM IST
PM drawn attention of problems of Karnataka says CM H D Kumaraswamy
Highlights

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರದಿಂದ ಹಣಕಾಸು ನೆರವು ಕೇಳಿದ್ದೇನೆ. ಇನ್ನು ಕೇಂದ್ರ ನಿಗದಿ ಮಾಡಿರುವ ಪ್ರಕೃತಿ ವಿಕೋಪ ನಿಧಿಯಲ್ಲಿ ಹೆಚ್ಚುವರಿಯಾಗಿ ಅನುದಾನ ನೀಡಲು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ[ಜೂ.18]: ರಾಜ್ಯದ ನಾನಾ ಸಮಸ್ಯೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಮುಖ್ಯಮಂತ್ರಿಗಳ ನೀತಿ ಆಯೋಗದ ಸಭೆಗಾಗಿ ಡೆಲ್ಲಿ ಪ್ರವಾಸದಲ್ಲಿರುವ ಎಚ್’ಡಿಕೆ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಗಳನ್ನು ವಿವರಿಸಿರುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರಲು ಕೇಂದ್ರದಿಂದ ಹಣಕಾಸು ನೆರವು ಕೇಳಿದ್ದೇನೆ. ಇನ್ನು ಕೇಂದ್ರ ನಿಗದಿ ಮಾಡಿರುವ ಪ್ರಕೃತಿ ವಿಕೋಪ ನಿಧಿಯಲ್ಲಿ ಹೆಚ್ಚುವರಿಯಾಗಿ ಅನುದಾನ ನೀಡಲು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ಕೇವಲ 34 ಸಾವಿರ ಕೋಟಿ ನಿಗದಿ ಮಾಡಿರುವ ಕುರಿತಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದು, ಕರ್ನಾಟಕಕ್ಕೆ ಕಡಿಮೆ ಹಣ ನಿಗದಿ ಮಾಡಿರುವುದಕ್ಕೆ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ ಹಾಗೂ ಈ ಕುರಿತಂತೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕುರಿತ ತೀರ್ಪಿನಲ್ಲಿ ಕೆಲವು ಅವೈಜ್ಞಾನಿಕ ನಿಯಮಗಳಿದ್ದು, ಅವುಗಳ ತಿದ್ದುಪಡಿಗೆ ಕೋರಿಕೊಂಡಿದ್ದೇನೆ. ಹೀಗಾಗಿ ಈ ಸಂಬಂಧ ಮತ್ತೊಂದು ಸಭೆ ನಡೆಸುವ ನಮ್ಮ ಮನವಿಯನ್ನು ಅವರು ಒಪ್ಪಿಕೊಂಡಿದ್ದಾರೆ ಎಂದು ಎಚ್’ಡಿಕೆ ತಿಳಿಸಿದ್ದಾರೆ. 
 

loader