ಕೊಲಂಬೋ(ಜೂ.09): ಮಾಲ್ಡೀವ್ಸ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಶ್ರೀಲಂಕಾಗೆ ಭೇಟಿ ನೀಡಿದ್ದಾರೆ. ಈ ಮೂಲಕ ಈಸ್ಟರ್ ಆತ್ಮಹತ್ಯಾ ಬಾಂಬ್ ದಾಳಿ ಬಳಿಕ ಶ್ರೀಲಂಕಾಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕರಾಗಿದ್ದಾರೆ.

 ಶ್ರೀಲಂಕಾಗೆ ಬಂದಿಳಿದ ಮೋದಿಯವರನ್ನು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅಭೂತಪೂರ್ವವಾಗಿ ಸ್ವಾಗತಿಸಿದರು. 

ಈ ವೇಳೆ ಕಳೆದ ಏಪ್ರಿಲ್‌ನಲ್ಲಿ ಈಸ್ಟರ್ ಸಂಡೆ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದರು. ಬಾಂಬ್ ಸ್ಫೋಟ ನಡೆದ ಸ್ಥಳಕ್ಕೆ ಹೋಗಿ ಅಲ್ಲಿ ಗಿಡ ನೆಟ್ಟು ಶಾಂತಿ, ಸೌಹಾರ್ದತೆಯ ಸಂದೇಶ ಸಾರಿದರು.

ಇನ್ನು ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ, ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ, ಶ್ರೀಲಂಕಾ ವಿಪಕ್ಷ ನಾಯಕರು ಮತ್ತು ತಮಿಳು ಸಂಘಟನೆಗಳ ನಿಯೋಗದೊಂದಿಗೆ ಮಾತುಕತೆ ನಡೆಸಲಿದ್ದಾರೆ. 

ಇನ್ನು ಮೋದಿ ಇಂದು ಇಂದು ಸಂಜೆ ಶ್ರೀಲಂಕಾದಿಂದ ನೇರವಾಗಿ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ದೆಹಲಿಗೆ ವಾಪಸ್ಸಾಗಲಿದ್ದಾರೆ.