ಮಾಸ್ಕೋ(ಸೆ.04):ಪ್ರಧಾನಿ ನರೇಂದ್ರ ಮೋದಿ 3 ದಿನಗಳ ರಷ್ಯಾ ಪ್ರವಾಸದಲ್ಲಿದ್ದು, ರಾಜಧಾನಿ ಮಾಸ್ಕೋಗೆ ಬಂದಿಳಿದ ಭಾರತದ ಪ್ರಧಾನಿಗೆ ಅದ್ದೂರಿ ಸ್ವಾಗತ ನೀಡಲಾಯಿತು.

ಮಾಸ್ಕೋದ ವ್ಲಾಡಿವೋಸ್ಟಾಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ರಷ್ಯಾ ಸೇನೆ ಗಾರ್ಡ್ ಆಫ್ ಹಾನರ್ ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತ ನೀಡಿತು.

ಒಟ್ಟು ಮೂರು ದಿನಗಳ ಕಾಲದ ಪ್ರವಾಸದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ರಕ್ಷಣೆ, ವ್ಯಾಪಾರ ಸಂಬಂಧ, ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಉಭಯ ನಾಯಕರು ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ. 

ಬಳಿಕ 5ನೇ ಪೂರ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ಇತರೆ ದೇಶಗಳ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

 

ತಮ್ಮ ಭೇಟಿಯ ಮೊದಲ ದಿನವೇ ಪ್ರಧಾನಿ ಮೋದಿ ರಷ್ಯಾದಲ್ಲಿರುವ ಭಾರತೀಯ ಸಂಜಾತರೊಂದಿಗೆ ಮಾತುಕಲತೆ ನಡೆಸಿದ್ದು ವಿಶೇಷವಾಗಿತ್ತು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ, ಭಾರತದ ನಿರ್ಣಯವನ್ನು ಬಹಿರಂಗವಾಗಿ ಬೆಂಬಲಿಸಿದ್ದ ಮೊದಲ ರಾಷ್ಟ್ರ ರಷ್ಯಾ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಷ್ಯಾ ಭೇಟಿಯಿಂದಾಗಿ ಪಾಕಿಸ್ತಾನ ಕಸಿವಿಸಿಗೊಂಡಿದೆ.