ದಸರಾ ಪ್ರಯುಕ್ತ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ಮತ್ತಿತರ ನಾಯಕರು ಭಾಗವಹಿಸಿದ್ದರು.
ನವದೆಹಲಿ(ಅ.19): ಶರನವರಾತ್ರಿಯ 9 ನೇ ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ದಸರಾ ಪ್ರಯುಕ್ತ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ಮತ್ತಿತರ ನಾಯಕರು ಭಾಗವಹಿಸಿದ್ದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಬೆಂಕಿಯ ಬಾಣಗಳಿಂದ ರಾವಣ ಪ್ರತಿಕೃತಿ ದಹಿಸಿದರು. ಈ ವೇಳೆ ಮಾತನಾಡಿದ ಮೋದಿ, ದೇಶದ ಜನತೆಗೆ ವಿಜಯ ದಶಮಿಯ ಶುಭ ಕೋರಿದರು.
ಪಶ್ಚಿಮ ಭಾರತದಲ್ಲಿ ದುರ್ಗಾ ಪೂಜೆ ಅಂತಿಮ ದಿನವಾಗಿ ವಿಜಯದಶಮಿ ಆಚರಿಸಿದರೆ, ಉತ್ತರ ಭಾರತದಾದ್ಯಂತ ದಸರಾ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಈ ವೇಳೆ ದುಷ್ಟ ಸಂಹಾರದ ಸಂಕೇತವಾಗಿ ರಾವಣ, ಕುಂಭಕರ್ಣ, ಪ್ರತಿಕೃತಿಗಳನ್ನು ನಿರ್ಮಿಸಿ ಅವುಗಳನ್ನು ದಹಿಸಲಾಗುತ್ತದೆ.
ಈಮಧ್ಯೆ ದುಷ್ಟ ಸಂಹಾರದ ಸಂಕೇತವಾಗಿ ಆಚರಿಸುವ ವಿಜಯದಶಮಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಮೂಡಿಸಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭ ಕೋರಿದ್ದಾರೆ.