Asianet Suvarna News Asianet Suvarna News

ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಸಿಗುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ..?

ಕಾಂಗ್ರೆಸ್ ನಲ್ಲಿ  ಐದು ವರ್ಷದ ಅವಧಿಗೆ ಗಾಂಧಿ ಕುಟುಂಬದಿಂದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಪಟ್ಟವು ಸಿಗುವುದು ಸಾಧ್ಯವಿದೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ. 

PM Modi challenges Congress to have a party president from outside Gandhi family
Author
Bengaluru, First Published Nov 16, 2018, 2:33 PM IST

ಚತ್ತೀಸ್ ಗಢ : ದೇಶದ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು ಸದ್ಯ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. 

 ಇದೇ ವೇಳೆ ಚತ್ತೀಸ್ ಗಢದಲ್ಲಿ ಚುನಾವಣೆ ನಡೆಯುತ್ತಿದ್ದು,ಈ ನಿಟ್ಟಿನಲ್ಲಿ ಚುನಾವಣಾ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಕಾಂಗ್ರೆಸ್ ನಲ್ಲಿ ಗಾಂಧಿ ಕುಟುಂಬವನ್ನು ಬಿಟ್ಟು ಬೇರೆಯವರನ್ನು ಅಧಿಕಾರದಲ್ಲಿ ನೋಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಇನ್ನು ಕಾಂಗ್ರೆಸ್ ಗೆ ನಾನು ಈ ವೇಳೆ ಚಾಲೇಂಜ್ ಮಾಡುತ್ತೇನೆ. ಗಾಂಧಿ ಕುಟುಂಬವನ್ನು ಹೊರತುಪಡಿಸಿ ಬೇರೆಯವರನ್ನು ಐದು ವರ್ಷಗಳ ಅವಧಿಗೆ ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಿ ಎಂದು ಹೇಳಿದ್ದಾರೆ. ಅಲ್ಲದೇ ನೆಹರು ಅವರು ನಿಜವಾಗಿಯೂ ಪ್ರಜಾಸತ್ತಾತ್ಮಕವಾದ ಪಕ್ಷವನ್ನು  ಸ್ಥಾಪಿಸಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. 

ಅಲ್ಲದೇ ಇದೆ ವೇಳೆ ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡರು ಚಾಯ್ ವಾಲ ಓರ್ವ ಹೇಗೆ ದೇಶದ ಪ್ರಧಾನಿಯಾದ ಎನ್ನುವ ಬಗ್ಗೆ ಇನ್ನೂ ಕೂಡ ಅವರಿಗೆ ಆಶ್ಚರ್ಯ ಕಾಡುತ್ತಿದೆ ಎಂದು ಹೇಳಿದ್ದಾರೆ.  

ಚತ್ತೀಸ್ ಗಢದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ನವೆಂಬರ್ 12 ರಂದು ಒಂದು ಹಂತದ ಚುನಾವಣೆ ನಡೆದಿದ್ದು, ನವೆಂಬರ್ 20 ರಂದು 2ನೇ ಹಂತದ ಚುನಾವಣೆ ನಡೆಯುತ್ತಿದೆ. 

Follow Us:
Download App:
  • android
  • ios