ಪಂಚರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಚಿತ್ತ ನೆಟ್ಟಿರುವ ಮಧ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ನವದೆಹಲಿ (ಮಾ.11): ಪಂಚರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಚಿತ್ತ ನೆಟ್ಟಿರುವ ಮಧ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಅಮರಿಂದರ್ ಜೊತೆ ಮಾತನಾಡಿದ್ದೇನೆ. ಪಂಜಾಬ್ ಗೆಲುವಿಗಾಗಿ ಅಭಿನಂದಿಸುತ್ತೇನೆ. ಅದೇ ರೀತಿ ಹುಟ್ಟುಹಬ್ಬದ ಶುಭಾಶಯಗಳು. ಅವರು ದೀರ್ಘಾಯುಷುಯಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪಂಜಾಬಿನ ಈ ಗೆಲುವು ನನ್ನ ಹುಟ್ಟುಹಬ್ಬಕ್ಕೆ ಕೊಟ್ಟ ದೊಡ್ಡ ಉಡುಗೊರೆ. ಪಂಜಾಬಿನ ಜನರು ಬಹಳ ಸಂವೇದನಾಶೀಲರು. ನಾನವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
