ನವದೆಹಲಿ(ಡಿ.11): ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸಂಸತ್ತಿನ ಚಳಿಗಾಲದ ಅಧಿವೇಶವನ್ನು ಪ್ರತಿಪಕ್ಷಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸುವ ಭರವಸೆಯನ್ನು ಈ ವೇಳೆ ಪ್ರಧಾನಿ ಮೋದಿ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತು, ಚರ್ಚೆ, ಮನಸ್ತಾಪ ಇವೆಲ್ಲವೂ ಸಾಮಾನ್ಯ. ಪ್ರತಿಪಕ್ಷಗಳ ಟೀಕೆಗಳನ್ನು ಸ್ವೀಕರಿಸಿ ಅರ್ಥಪೂರ್ಣ ಅಧಿವೇಶನ ನಡೆಸಲಾಗುವುದು ಎಂದು ಮೋದಿ ಹೇಳಿದರು.

ಈ ಮಧ್ಯೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸದೇ ಮೋದಿ ಸಂಸತ್ತಿನ ಒಳಗೆ ಪ್ರವೇಶ ಮಾಡಿದರು.